ಮುಕ್ತಿಗೆ ಮುಖವಾಗಿ ಯುಕ್ತಿಗೆ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮುಕ್ತಿಗೆ ಮುಖವಾಗಿ ಯುಕ್ತಿಗೆ ಹೊರಗಾಗಿ ಅರಿವಿಂಗೆ ಅರಿವಾಗಿಪ್ಪ ಭೇದ ಕಾಣಬಂದಿತ್ತು ನೋಡಾ ! ಅರಿವರಿತು ಮರಹು ನಷ್ಟವಾಗಿಪ್ಪುದು ನಿನ್ನಲ್ಲಿ ಸನ್ನಹಿತವಾಗಿತ್ತು. ಗುಹೇಶ್ವರನ ಶರಣ ಅಜಗಣ್ಣನ ನಿಲವು ಬಯಲ ಬೆರಸಿದ ಮರೀಚಿಯಂತಾಯಿತ್ತು
ಬೆರಸಿ ನೋಡಾ ಬೇರಿಲ್ಲದೆ !