ವಿಷಯಕ್ಕೆ ಹೋಗು

ಮುತ್ತು ಒಡೆದಡೆ ಬೆಸೆಯಬಹುದೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಮುತ್ತು ಒಡೆದಡೆ ಬೆಸೆಯಬಹುದೆ ? ಮನ ಮುರಿದಡೆ ಸಂತಕ್ಕೆ ತರಬಹುದೆ ? ಅಪ್ಪುಗೆ ಸಡಲಿದ ಸುಖವ ಮರಳಿ ಅರಸಿದರುಂಟೆ ? ಸಾಧಕನೊಯಿದ ನಿಧಾನದ ಕುಳಿಯಂತೆ ಅಲ್ಲಿ ಏನುಂಟು ? ಮಚ್ಚು ಪಲ್ಲಟವಾಗಿ
ನೋಟದ ಸುಖವ ಹಿಂಗಿದರೊಳವೆ ? ನೋಡದಿರು
ಕಾಡದಿರು
ಮನಬಳಸದಿರು. ಭಾಷೆಗೆ ತಪ್ಪಿದರೆ ಮುಳ್ಳುಮೊನೆಯ ಕಿಚ್ಚಿನಂತೆ. ಲೇಸು ಬೀಸರವೋಗದ ಮುನ್ನ ಚೆನ್ನಮಲ್ಲಿಕಾರ್ಜುನನ ಕೂಡಿ ಧಾತುಗೆಟ್ಟ ಬಳಿಕ ಒಳವೆ ?