ಮುತ್ತು ನೀರಲಾಯಿತ್ತು ವಾರಿಕಲ್ಲು ನೀರಲಾಯಿತ್ತು ಉಪ್ಪು ನೀರಲಾಯಿತ್ತು. ಉಪ್ಪು ಕರಗಿತ್ತು ವಾರಿಕಲ್ಲು ಕರಗಿತ್ತು ಮುತ್ತು ಕರಗಿದುದನಾರೂ ಕಂಡವರಿಲ್ಲ. ಈ ಸಂಸಾರಿಮಾನವರು ಲಿಂಗವಮುಟ್ಟಿ ಭವಭಾರಿಗಳಾದರು. ನಾ ನಿಮ್ಮ ಮುಟ್ಟಿ ಕರಿಗೊಂಡೆನಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ.