ಮುನ್ನಿನ ಕಲಿ ವೀರಧೀರರು

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮುನ್ನಿನ ಕಲಿ ವೀರಧೀರರು ಕಾದಿದ ರಣಗಳನು ಪರಿಪರಿಯಲಿ ಬಣ್ಣಿಸಿ ಹೇಳಲುಬಹುದಲ್ಲದೆ ಆ ದಳವಿದಿರಾದಲ್ಲಿ ಬಿರಿದ ಪಚಾರಿಸಿ
ಕಾದಿ ತೋರಲುಬಾರದು. ಮುನ್ನಿನ ಪುರುಷಬ್ರತಿಯರು ಒಲಿಸಿದ ಆಯತವ ಪರಿಪರಿಯಲು ಬಣ್ಣಿಸಲು ಬಹುದಲ್ಲದೆ ಪುರುಷನಿರ್ವಾಣಕ್ಕುರಿವಗ್ನಿಯ ಬಂದು ಹೊಕ್ಕು ತೋರಲುಬಾರದು. ಮುನ್ನಿನ ಪುರಾತನರೆಲ್ಲರು ತನುಮನಧನವನ್ನಿತ್ತು ಮಾಡಿ
ನೀಡಿ ಲಿಂಗವ ಕೂಡಿದ ಪರಿಗಳನು ಅನುಭವದಲರ್ಥೈಸಿ ಹೇಳಬಹುದಲ್ಲದೆ ಮಾಡಿ
ನೀಡಿ ತೋರಲುಬಾರದು. ಇಂತೀ ಅರೆಬಿರಿದಿನ ಬಂಟರು
ಪುರುಷಬ್ರತಿಯರು
ಪುರಾತನರು ಬರಿಯ ಮಾತನಾಡಿ ಹೊರಗೆ ಮೆರೆವರಲ್ಲಾ ! ಪರೀಕ್ಷೆಯುಂಟಾಗಿಯಿದ್ದಡೆ ಒಳಗಣವರ ಹೆಸರ ಹಿಡಿದು ಪರಿಪರಿಯಲು ಹೊಗಳುವರು. ಶರೀರಮರ್ಥಪ್ರಾಣ ಗುರುಲಿಂಗಜಂಗಮಕ್ಕೆ ಪರೀಕ್ಷೆಯುಂಟಾಗಿಯೆ `ಆತ ಮಹೇಶ್ವರ ಪುರಾತವಳಿ'ಯೆಂಬ ಪರಮಬಂಧುಗಳಾತನ ನೆನೆನೆನೆದು ಬದುಕುವರು. ಇಂತೀ ಅನುಭಾವದಲೋದಿ
ಅಕ್ಷರಾಭ್ಯಾಸವ ಸಾಧಿಸಿ ತರ್ಕಿಸಿ ನಿಂದಿಸಲಾಗದು
ಕೂಡಲಸಂಗನ ಶರಣರಿಗಲ್ಲದನುಭಾವವಿಲ್ಲ.