ಮುಸುರೆಯ ಮಡಕೆಯ ನೊಣ

ವಿಕಿಸೋರ್ಸ್ದಿಂದ



Pages   (key to Page Status)   


ಮುಸುರೆಯ ಮಡಕೆಯ ನೊಣ ಮುತ್ತಿಕೊಂಡಿಪ್ಪಂತೆ
ಕಸವುಳ್ಳ ಹೊಲದಲ್ಲಿ ಪಶುಗಳು ನೆರೆದಿಪ್ಪಂತೆ
ಅನ್ನ ಉದಕ ಹೊನ್ನು ವಸ್ತ್ರವುಳ್ಳ ದೊರೆಯ ಬಾಗಿಲಲ್ಲಿ ಬಹುಭಾಷೆಯ ಹಿರಿಯರುಗಳು ನೆರೆದುಕೊಂಡಿಪ್ಪರು. ಗುಹೇಶ್ವರಾ
ನಿಮ್ಮ ಶರಣರು ಆಶಾಪಾಶವಿರಹಿತರು !