ಮೂರುಮಂಡಲ ತಿರುಗುವಲ್ಲಿ ಆರೂರವರು
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮೂರುಮಂಡಲ ತಿರುಗುವಲ್ಲಿ ಆರೂರವರು ಅಳುತ್ತಿರ್ಪರು ನೋಡಾ. ಬೇರೊಂದೂರವರು ಬಂದು
ಮೂರುಮಂಡಲವನೊಂದುಮಾಡಿ ಆರೂರವರ ಆಳುವ ಮಾಣಿಸಿ ಬೇರೊಂದೂರ ಹೊಕ್ಕು ನೋಡಲು ಈ ಊರೊಳಗೆ ಸತ್ತವನಿವನಾರೋಯೆಂದು ನೋಡಿಯೆತ್ತಹೋಗಲು ಎಲ್ಲರೂ ಸತ್ತುದ ಕಂಡು ಬೆರಗಾದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.