ಮೂರು ಪುರದ ಹೆಬ್ಬಾಗಿಲೊಳಗೊಂದು

ವಿಕಿಸೋರ್ಸ್ದಿಂದ



Pages   (key to Page Status)   


ಮೂರು ಪುರದ ಹೆಬ್ಬಾಗಿಲೊಳಗೊಂದು ಕೋಡಗನ ಕಟ್ಟಿರ್ದುದ ಕಂಡೆ. ಅದು ಕಂಡಕಂಡವರನೇಡಿಸುತ್ತಿದ್ದಿತ್ತು ನೋಡಾ! ಆ ಪುರದರಸು ತನ್ನ ಪಾಯದಳ ಸಹಿತ ಬಂದಡೆ
ಒಂದೆ ಬಾರಿ ಮುರಿದು ನುಂಗಿತ್ತ ಕಂಡೆ. ಆ ಕೋಡಗಕ್ಕೆ ಒಡಲುಂಟು ತಲೆಯಿಲ್ಲ. ಕಾಲುಂಟು ಹೆಜ್ಜೆಯಿಲ್ಲ
ಕೈಯುಂಟು ಬೆರಳಿಲ್ಲ. ಇದು ಕರಚೋದ್ಯ ನೋಡಾ
ತನ್ನ ಕರೆದವರ ಮುನ್ನವೆ ತಾ ಕರೆವುದು! ಆ ಕೋಡಗ ತನ್ನ ಬಸುರಲ್ಲಿ ಬಂದ ಮದಗಜದ ನೆತ್ತಿಯನೇರಿ
ಗಾಳಿಯ ದೂಳಿಯ ಕೂಡಿ ಓಲಾಡುತ್ತಿಹುದ ಕಂಡೆ ! ವಾಯದ ಗಗನದ ಮೇಲೆ ತನ್ನ ಕಾಯವ
ಪುಟನೆಗೆದು ತೋರುತ್ತಿಹುದ ಕಂಡೆ ! ಹತ್ತು ಮುಖದ ಸರ್ಪನ ತನ್ನ ಹೇಳಿಗೆಯೊಳಗಿಕ್ಕಿ
ಆಡಿಸುತ್ತಿಹುದ ಕಂಡೆ ! ಐವರು ಕೊಡಗೂಸುಗಳ ಕಣ್ಣಿಂಗೆ
ಕನ್ನಡಕವ ಕಟ್ಟುತಿಹುದ ಕಂಡೆ! ಹತ್ತು ಕೇರಿಗಳೊಳಗೆ ಸುಳಿವ ಹರಿಯ ನೆತ್ತಿಯ ಮೆಟ್ಟಿ
ಹುಬ್ಬೆತ್ತುತ್ತಿಹುದ ಕಂಡೆ ! ಆ ಕೋಡಗದ ಕೈಯೊಳಗೆ ಮಾಣಿಕವ ಕೊಟ್ಟರೆ
ನೋಡುತ್ತ ನೋಡುತ್ತ ಬೆರಗಾದುದ ಕಂಡೆ ! ಕೂಡಲಿಲ್ಲ ಕಳೆಯಲಿಲ್ಲ; ಗುಹೇಶ್ವರÀ[ನ]ನಿಲುವು
ಪ್ರಾಣಲಿಂಗಸಂಬಂಧವಿಲ್ಲದವರಿಗೆ ಕಾಣಬಾರದು.