ಮೂಲಾಧಾರದ ಬೇರ ಮೆಟ್ಟಿ ಭ್ರೂಮಂಡಲವನೇರಿದೆ. ಆಚಾರದ ಬೇರ ಹಿಡಿದು ಐಕ್ಯದ ತುದಿಯನೇರಿದೆ. ವೈರಾಗ್ಯದ ಸೋಪಾನದಿಂದ ಶ್ರೀಗಿರಿಯನೇರಿದೆ. ಕೈವಿಡಿದು ತೆಗೆದುಕೊಳ್ಳಾ ಚೆನ್ನಮಲ್ಲಿಕಾರ್ಜುನಾ.