ವಿಷಯಕ್ಕೆ ಹೋಗು

ಮೂಲ ಮಂತ್ರವ ಕರ್ಣದಲ್ಲಿ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಮೂಲ ಮಂತ್ರವ ಕರ್ಣದಲ್ಲಿ ಹೇಳಿ ಶ್ರೀ ಗುರು ಶಿಷ್ಯನಂಗದ ಮೇಲೆ ಲಿಂಗ ಪ್ರತಿಷೆ*ಯ ಮಾಡಿದ ಬಳಿಕ ತನುವಿನೊಳಗೆ ಲಿಂಗ ಬೇರಿಪ್ಪುದೆಂಬ ವ್ರತಗೇಡಿಯ ಮಾತ ಕೇಳಲಾಗದು. ಒಳಗಿಪ್ಪನೆ ಲಿಂಗದೇವನು ? ಮಲಮೂತ್ರದ ಹೇಸಿಕೆಯೊಳಗೆ
ಪ್ರಾಣವಿಪ್ಪುದಲ್ಲದೆ ಲಿಂಗವಿಪ್ಪುದೆ ? ಆ ಪ್ರಾಣನ ತಂದು
ತನ್ನ ಇಷ್ಟಲಿಂಗದಲ್ಲಿರಿಸಿ ನೆರೆಯಬಲ್ಲರೆ ಆತನೆ ಪ್ರಾಣಲಿಂಗಸಂಬಂಧಿ. ಇಷ್ಟಿಲ್ಲದವರ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು ?