ಮೃಡನೆ ನಿಮ್ಮ ಪುರಾತನರ ಕಾಣುತ್ತ ತಡೆಯದೆ ಇದಿರೆದ್ದು ಹೊಡೆವಡೆನಾಗಿ ಬಿಡದು ನಾಚಿಕೆ. ಸುಡಲಿಕೆನ್ನ ನುಡಿಹ ಸಡಿಲದೆನ್ನ ಅಹಂಕಾರ ನೋಡಯ್ಯಾ. ಬಡಮನದವನ ಜಡಿದು ನಡೆಸಯ್ಯಾ ಗುಹೇಶ್ವರಾ.