ಮೊಲನ ಕಂಡ ನಾಯಂತೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮೊಲನ ಕಂಡ ನಾಯಂತೆ ಇಂದ್ರಿಯವಿಷಯಕ್ಕೆ ಮುಂದುವರಿಯದಿರಾ. ಅಂಗನೆಯರ ಸಮ್ಮೇಳದಿಂ ಭಂಗಿತನಾಗದಿರಾ. ಲಿಂಗವನಪ್ಪಿ ಸುಖಿಯಾಗಿ ಎಲೆ ಮನವೇ. ಅಂಗದಿಚ್ಛೆಗೆ ಆಯಸಂಬಡದಿರಾ. ಲಿಂಗ ಸಂಗಿಗಳು ನೋಡಿ ನಗುವರೆಲೆ[ಲೆಲೆ] ಮನವೇ. ಇಂದ್ರಿಯಭೋಗಂಗಳೆಂಬವು ಕನಸಿನ ಸಿರಿಯಂತೆ ತೋರಿ ಅಡಗುವವೋ. ಇವನೇಕೆ ನಚ್ಚುವೆ ಮಚ್ಚುವೆ ಹುಚ್ಚು ಮನವೇ? ಹರಹರಾ ಶಿವ ಶಿವಾ ಎನ್ನೆಯೋ ಎಲೆಲೆ ಮನವೇ. ನಿನ್ನ ನಾ ಬೇಡಕೊಂಬೆನಯ್ಯೋ ಎಲೆಲೆ ಮನವೇ. ಸಿಂಹನ ಕಂಡ ಕರಿಯಂತೆ ಕೆಡೆಬಡೆದೋಡದರಿಯ್ಯೋ ಪಾಪಿ ಮನವೇ. ಲಿಂಗ ಪಾದವ ಸಾರಿ
ಶಿವಭಕ್ತನಾಗಿ ಮುಕ್ತಿಸಮ್ಮೇಳನಾಗಯ್ಯ. ಕರ್ತೃ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವನೊಡಗೂಡಿ
ನಿತ್ಯನಾಗಬಲ್ಲರೆಲೆಲೆ ಮನವೇ.