ಮೊಲೆ ಬಿದ್ದು, ಮುಡಿ

ವಿಕಿಸೋರ್ಸ್ದಿಂದ



Pages   (key to Page Status)   


ಮೊಲೆ ಬಿದ್ದು
ಮುಡಿ ಸಡಲಿ
ಗಲ್ಲ ಬತ್ತಿ
ತೋಳು ಕಂದಿದವಳ ಎನ್ನನೇಕೆ ನೋಡುವಿರಿ ಎಲೆ ಅಣ್ಣಗಳಿರಾ ? ಕುಲವಳಿದು ಛಲವಳಿದು ಭವಗೆಟ್ಟು ಭಕ್ತೆಯಾದವಳ
ಎನ್ನನೇಕೆ ನೋಡುವಿರಿ ಎಲೆ ತಂದೆಗಳಿರಾ ? ಚೆನ್ನಮಲ್ಲಿಕಾರ್ಜುನನ ಕೂಡಿ ಕುಲವಳಿದು ಛಲವಳಿದವಳನು.