ಮೋಟರ ಮದುವೆಗೆ ಭಂಡರು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮೋಟರ ಮದುವೆಗೆ ಭಂಡರು ಹರೆಯ ಹೊಯ್ದು
ಮೂಕೊರತಿಯರು ಕಳಸವ ಹೊತ್ತರಲ್ಲಾ ! `ಉಘೇ ಚಾಂಗು ಭಲಾ' ಎಂದು ನಿಬ್ಬಣ ನೆರೆದು
ಹೂದಂಬುಲಕ್ಕೆ ಮುನಿವರದೇಕಯ್ಯಾ ? ತ್ರಿಜಗವೆಲ್ಲಾ ನಿಬ್ಬಣವಾಯಿತ್ತು
ಗುಹೇಶ್ವರನನರಿಯದ ಹಗರಣವೊ !