ಮೋಸ ಹೋದೆನಲ್ಲಾ

ವಿಕಿಸೋರ್ಸ್ದಿಂದ

ಮೋಸ ಹೋದೆನಲ್ಲಾ[ಸಂಪಾದಿಸಿ]

ರಾಗ: ಧನ್ಯಾಸಿ; ತಾಳ: ಆದಿ

ಮೋಸ ಹೋದೆನಲ್ಲಾ ತಿಳಿಯದೆ ಮೋಸ ಹೋದೆನಲ್ಲಾ || ಪ ||

ಕ್ಲೇಶಪಾಶವನು ನಾಶಮಾಡುವ
ಶ್ರೀಶನಂಘ್ರಿಗಳ ಲೇಸಾಗಿ ಸ್ಮರಿಸದೆ || ೧ || -ಮೋಸ ಹೋದೆನಲ್ಲಾ

ಕಾಯದಾಶೆಯಿಂದ ಕಂಡದ್ದು ಬೇಡಿ ಶ್ವಾನನಂತೆ
ಮಾಯಪಾಶದಲಿ ಸಿಲುಕಿ ನಾನು ಮಾರಮಣನೆ ನಿನ್ನ ಧ್ಯಾನಮಾಡದೇ || ೨ || -ಮೋಸ ಹೋದೆನಲ್ಲಾ

ಪುಷ್ಪ ಜಾಜಿಗಳನು ಮಲ್ಲಿಗೆ ಭಕ್ತಿಭಾವದಿಂದ ತಂದು
ಕೃಷ್ಣಾವತಾರನ ಪೂಜೆಯ ಮಾಡಿ ವಿಷ್ಣುಲೋಕವನು ಸೂರೆಗೊಳ್ಳದೆ || ೩ || - ಮೋಸ ಹೋದೆನಲ್ಲಾ

ಸತಿಸುತಾದಿ ಬಂಧುಬಳಗ ಹಿತವ ನುಡಿವರ್ಯಾರೋ
ಗತಿ ನೀನೆ ತಂದೆತಾಯಿ ನೀನೆ ಸದ್ಗತಿ ಈಯೋ ಪುರಂದರವಿಟ್ಠಲ || ೪ || -ಮೋಸ ಹೋದೆನಲ್ಲಾ -- [೧]

ರಚನೆ ಪುರದರದಾಸರು.

ನೋಡಿ[ಸಂಪಾದಿಸಿ]

ಪರಿವಿಡಿ[ಸಂಪಾದಿಸಿ]

ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ[ಸಂಪಾದಿಸಿ]

  1. ದಾಸವಾಣಿ