ಸ್ನೇಹ ಮಾಡಬೇಕಿಂಥವಳ!
ಗೋಚರ
(ಮೋಹದ ಹೆಂಡತಿ ಸತ್ತ ಬಳಿಕ ಇಂದ ಪುನರ್ನಿರ್ದೇಶಿತ)
ಸ್ನೇಹ ಮಾಡಬೇಕಿಂಥವಳ!ಒಳ್ಳೇ ಮೋಹದಿಂದಲಿ ಬಂದು - ಕೂಡುವಂಥವಳ
[ಸಂಪಾದಿಸಿ]- ಹೆಂಡತಿಯ ಸಾವಿನ ನಂತರದ ನೋವಿನ ಹಢಿರಬಹುದು; ಇದರ ಮುಂದಿನ ಪದ ನೋಡಿ:ಮೋಹದ ಹೆಂಡತಿ ಸತ್ತ ಬಳಿಕ
ಸ್ನೇಹ ಮಾಡಬೇಕಿಂಥವಳ! - ಒಳ್ಳೇ
ಮೋಹದಿಂದಲಿ ಬಂದು - ಕೂಡುವಂಥವಳ
ಚಂದ್ರಗಾವಿ ಶೀರೀನುಟ್ಟು - ದಿವ್ಯ
ಕೆಂದಾವರಿ ಮಗ್ಗಿ ಕುಪ್ಪಸ ತೊಟ್ಟು
ಬಂದಳು ಮಂದಿರ ಬಿಟ್ಟು - ನಾಲ್ಕು
ಮಂದಿಯೊಳು ಬಂದು ನಾಚುವಳೆಷ್ಟು!
ಅರಗಿಳಿ ಸಮ ಇವಳ ನುಡಿಯು - ಚೆಲ್ವ
ಸುಳಿನಾಭಿ ಕುಚಕುಂಭಗಳ ಹಂಸನಡೆಯು
ಥಳಥಳಿಸುವ ತೋಳ್ತೊಡೆಯು - ಒಳ್ಳೇ
ಬಳುಬಳುಕುವ ನಡುವು ತಳಿರಡಿಯು.
ಮುಕ್ತ ಕಾಮಿನಿ ಎನ್ನ ಕಾಡಿ - ಮೋಹ
ಮತ್ತ ಸುರತಸುಖ ಸುಡುವಂತೆ ಕೂಡಿ
ಹುಟ್ಟನ್ನೇ ಕಳೆದಳೊ ಖೋಡಿ - ದೇವ
ಶಿಶುನಾಳಾಧೀಶನ ಪಾದಕೆ ದೂಡಿ!
ಮೋಹದ ಹೆಂಡತಿ ಸತ್ತ ಬಳಿಕ
[ಸಂಪಾದಿಸಿ]ಮೋಹದ ಹೆಂಡತಿ ಸತ್ತ ಬಳಿಕ
ಮಾವನ ಮನೆಯ ಹಂಗಿನ್ನ್ಯಾಕೋ ||ಪಲ್ಲ||
ಸಾವು ನೋವಿಗೆ ತರುವ ಬೀಗನ
ಮಾತಿನ ಹಂಗೊಂದೆನಗ್ಯಾಕೋ ||ಅನುಪಲ್ಲ||
ಖಂಡವನದಿ ಸೋಂಕಿ ತನ್ನ ಮೈಯೊಳು ತಾಕಿ
ಬಂಡೆದ್ದು ಹೋಗುವದು ಭಯವ್ಯಾಕೋ
ಮಂಡಲನಾಡಿಗೆ ಪಿಂಡದ ಗೂಡಿಗೆ
ಚಂಡಿತನದಿ ಚರಿಸ್ಯಾಡುವದ್ಯಾಕೋ ||೧||
ತಂದೆ ಗುರುಗೋವಿಂದನ ಸೇವಕ
ಕುಂದಗೋಳಕೆ ಬಂದು ನಿಂತಾನ್ಯಾಕೋ
ಬಂಧುರ ಶಿಶುನಾಳಧೀಶನ ದಯದಿಂದ
ಇಂದಿಗೆ ವಿಷಯದ ವ್ಯಸನಗಳ್ಯಾಕೋ ||೨||
ನೋಡಿ
[ಸಂಪಾದಿಸಿ]ಉಲ್ಲೇಖ
[ಸಂಪಾದಿಸಿ]- ಶಿಶುನಾಳ ಶರೀಫರ ಪದಗಳು -ಅನಾಮಿಕ