ಮೌನದಲುಂಬುದು ಆಚಾರವಲ್ಲ. ಲಿಂಗಾರ್ಪಿತವ ಮಾಡಿದ ಬಳಿಕ ತುತ್ತಿಗೊಮ್ಮೆ ಶಿವಶರಣೆನುತ್ತಿರಬೇಕು. ಕರಣವೃತ್ತಿಗಳಡಗುವವು ಕೂಡಲಸಂಗನ ನೆನೆವುತ್ತ ಉಂಡಡೆ.