ಯತ್ರ ಜೀವಸ್ತ್ರ ಶಿವನೆಂಬ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಯತ್ರ ಜೀವಸ್ತ್ರ ಶಿವನೆಂಬ ಬಾಲಭಾಷೆಯ ಕೇಳಲಾಗದು ಶಿವಶಿವಾ ಯತ್ರಜೀವಸ್ತತ್ರ ಶಿವನಾದರೆ ಜೀವಂಗೆ ಮರಣವೇಕೋ? ಯತ್ರ ಜೀವಸ್ತತ್ರ ಶಿವನಾದರೆ ಜನನ ಸ್ಥಿತಿ ಮರಣ ರುಜೆ ಸಂಸಾರ ಬಂಧನವೇಕೋ? ಯತ್ರ ಜೀವಸ್ತತ್ರ ಶಿವನಾದರೆ ಪುಣ್ಯಪಾಪ ಪ್ರಳಯಕಾಲ ಕಲ್ಪಿತವೇಕೊ? ಇದು ಕಾರಣ ಯತ್ರ ಜೀವಸ್ತತ್ರ ಶಿವನಲ್ಲ
ಉತ್ಪತ್ತಿ ಸ್ಥಿತಿ ಪ್ರಳಯರಹಿತನು ಸದ್ಭಕ್ತರಲ್ಲಿಪ್ಪನಲ್ಲದೆ ಮತ್ತೆಲ್ಲಿಯೂ ಇಲ್ಲ
ಕೂಡಲಚೆನ್ನಸಂಗಮದೇವ.