ಯಾಕೆ ಮೂರ್ಖನಾದ್ಯೋ ಮನುಜ

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು

ಯಾಕೆ ಮೂರ್ಖನಾದ್ಯೋ ಮನುಜ[ಸಂಪಾದಿಸಿ]

ರಾಗ: ನಾದನಾಮಕ್ರಿಯೆ. ತಾಳ: ಆದಿ.

ಯಾಕೆ ಮೂರ್ಖನಾದ್ಯೋ ಮನುಜ
ಯಾಕೆ ಮೂರ್ಖನಾದ್ಯೋ ||ಪ||

ಯಾಕೆ ಮೂರ್ಖನಾದ್ಯೋ ನೀನು
ಕಾಕುಬುದ್ಧಿಯನ್ನು ಬಿಟ್ಟು
ಲೋಕನಾಥನನ್ನು ನೆನೆ ಕಂಡ್ಯ ಮನುಜ ||೧||

ಸಾಧು ಸಜ್ಜನ ಸಂಗ ಮಾಡು
ಭೇದಾಭೇದ ತಿಳಿದು ನೋಡು
ವಾದ ಬುದ್ಧಿ ಮಾಡುವರೇನೋ ಮನುಜ ||೨||

ದಾನ ಧರ್ಮವನ್ನು ಮಾಡು
ಜ್ಞಾನದಿಂದ ತಿಳಿದು ನೋಡು
ಹೀನಬುದ್ಧಿ ಮಾಡುವರೇನೋ ಮನುಜ || ೩ ||

ಮಕ್ಕಳು ಹೆಂಡಿರು ತನ್ನವರೆಂದು
ರೊಕ್ಕವನ್ನು ಗಳಿಸಿಕೊಂಡು
ಸೊಕ್ಕಿನಿಂದ ತಿರುಗುವರೇನೋ ಮನುಜ ||೪||

ಅಂತಕನ ದೂತರು ಬಂದು
ಕಂತೆ ಕಟ್ಟು ಹೊರಡು ಎಂದು
ನಿಂತರೆಲ್ಲರು ಬಿಡಿಸುವರೇನೋ ಮನುಜ ||೫||

ಅರಿಷಡ್ವರ್ಗದ ಆಟವ ಬಿಟ್ಟು
ಪುರಂದರವಿಠಲನ ಧ್ಯಾನದೊಳಿಟ್ಟು
ಪರಗತಿ ದಾರಿಯ ನೋಡೋ ಮನುಜ || ೬ ||[೧]

  • ರಚನೆ:- ಪುರಂದರದಾಸರು.

ನೋಡಿ[ಸಂಪಾದಿಸಿ]

ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಪುರಂದರದಾಸರು

ಪರಿವಿಡಿ[ಸಂಪಾದಿಸಿ]

ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ

ಉಲ್ಲೇಖ[ಸಂಪಾದಿಸಿ]

  1. ದಾಸವಾಣಿ