ವಿಷಯಕ್ಕೆ ಹೋಗು

ಯಾರು ಬಿಟ್ಟರೂ ಕೈಯ ನೀ ಬಿಡದಿರು

ವಿಕಿಸೋರ್ಸ್ದಿಂದ

ಯಾರು ಬಿಟ್ಟರೂ ಕೈಯ ನೀ ಬಿಡದಿರು

[ಸಂಪಾದಿಸಿ]

ರಾಗ: ನಾದನಾಮಕ್ರಿಯೆ , ತಾಳ: ಆದಿ.
ಯಾರು ಬಿಟ್ಟರೂ ಕೈಯ ನೀ ಬಿಡದಿರು ಕಂಡ್ಯ ನಾರಾಯಣ ಸ್ವಾಮಿ
ನೀ ಬಿಟ್ಟರೆ ಮುಂದಿನ್ನಾರು ಕಾಯ್ವರ ಕಾಣೆ ನಾರಾಯಣ ||ಪ||

ಮುಂದೆ ನೋಡಿದರೆ ಹೆಬ್ಬುಲಿ ಬಾಯ್ಬಿಡುತಿದೆ ನಾರಾಯಣ ಸ್ವಾಮಿ
ಹಿಂದೆ ನೋಡಿದರೆ ಹೆಬ್ಬಾವು ನುಂಗುತಲಿದೆ ನಾರಾಯಣ
ಕಂಡು ಮಡುವ ಬೀಳಲು ಅಲ್ಲಿ ನೆಗಳಿಗೆ ನಾರಾಯಣ ಬಹು
ಬಂಧನದೊಳು ಸಿಕ್ಕಿ ಬಳಲಿ ನೊಂದೆನಯ್ಯ ನಾರಾಯಣ ||೧||

ನಂಬಿ ನಾ ಪಿಡಿದರೆ ಕೊಂಬೆಲ್ಲ ಮುರಿದಾವು ನಾರಾಯಣ ಸ್ವಾಮಿ
ಹಂಬಲಿಸಿದರಂಜಬೇಡವೆಂಬುವರಿಲ್ಲ ನಾರಾಯಣ
ತುಂಬಿದ ಹೊಳೆಯಲ್ಲಿ ಹರಿಗೋಲನೇರಿದೆ ನಾರಾಯಣ ಸ್ವಾಮಿ
ಅಂಬಿಗನಂತೆನ್ನ ದಡವ ಸೇರಿಸೊ ಮುನ್ನ ನಾರಾಯಣ ||೨||

ಶಿಶು ಅವತಾರದಿ ಪಶುಗಳ ನೀ ಕಾಯ್ದೆ ನಾರಾಯಣ ಸ್ವಾಮಿ
ದಶ ಅವತಾರದಿ ಚಕ್ರವ ತಾಳಿದೆ ನಾರಾಯಣ
ವಿಷದ ಕಾಳಿಂಗನ ಮಡುವ ಕಲಕಿ ಬಂದೆ ನಾರಾಯಣ ಸ್ವಾಮಿ
ವಸುಧೆಯೊಳಧಿಕ ಪುರಂದರವಿಠಲನೆ ನಾರಾಯಣ ||೩||[]
ರಚನೆ ಪುರಂದರ ದಾಸರು

ಪರಿವಿಡಿ

[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ

[ಸಂಪಾದಿಸಿ]
  1. .ದಾಸವಾನಣಿ