ಯುವತಿಯರ ವ್ಯವಹಾರವೆಂಬ ವಿಕಳತೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಯುವತಿಯರ ವ್ಯವಹಾರವೆಂಬ ವಿಕಳತೆ ಹತ್ತಿ ಯೋಗದ ಸಮತೆ ಸಡಿಲಿತ್ತು ನೋಡಾ. ಸತ್ಯ ಸತ್ತಿತ್ತು
ಭಕ್ತಿಯರತಿತ್ತು. ಮಾಯಾವಿಲಾಸವೆಂಬ ಮೃತ್ಯು ಮುಟ್ಟದ ಮುನ್ನ
ನಿಮ್ಮತ್ತ ಹಿಡಿದು ಎತ್ತಿಕೊಳ್ಳಯ್ಯಾ
ಮಹಾಲಿಂಗ ಗುರು ಶಿವಸಿದ್ಧೇಶ್ವರ ಪ್ರಭುವೇ.