ಯೋಗ ಅರಿಯರಲ್ಲ ಯೋಗವೆಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಯೋಗ ಯೋಗವೆಂದು ನುಡಿಯುತಿರ್ಪರೆಲ್ಲರು ; ಯೋಗದೊಳಗಣ ಯೋಗವನಾರೂ ಅರಿಯರಲ್ಲ ! ಮಂತ್ರಯೋಗ
ಲಯಯೋಗ
ಹಠಯೋಗ
ರಾಜಯೋಗವೆಂದು ಯೋಗ ಚತುರ್ವಿಧದೊಳಗೆ
ಮೊದಲು ಮಂತ್ರಯೋಗದ ಭೇದವೆಂತೆಂದೊಡೆ : ಆವನಾನೊಬ್ಬ ಯೋಗಸಿದ್ಧಿಯ ಪಡೆವಾತನು ಪಕ್ಷಿಗಳುಲಿಯದ ಮುನ್ನ
ಪಶುಗಳು ಕೂಗದ ಮುನ್ನ
ಪ್ರಕೃತಿ ಆತ್ಮರು ಸುಳಿಯದ ಮುನ್ನ
ಶುಭಮುಹೂರ್ತದಲ್ಲಿ ಶಿವಧ್ಯಾನಮಂ ಮಾಡುತೆದ್ದು ಶೌಚಾಚಮನ ದಂತಧಾವನಂಗಳಂ ಮಾಡಿ ಜಲಸ್ನಾನಂಗೈದು
ಏಕಾಂತಸ್ಥಳದಲ್ಲಿ ಕಂಬಳಾಸನದಿ ಗದ್ದುಗೆಯಲ್ಲಿ ಪೂರ್ವಮುಖವಾಗಲಿ ಉತ್ತರಮುಖವಾಗಲಿ ತನಗಿಷ್ಟಾಸನದಲ್ಲಿ ಕುಳ್ಳಿರ್ದು
ಭಸ್ಮಸ್ನಾನಂಗಳನಾಚರಿಸಿ ಆಗಮೋಕ್ತದಿಂದೆ ಈಶ್ವರಾರ್ಚನೆಯಂ ಮಾಡಿ ಬಳಿಕ ಅಂತರಾಳಹೃದಯಕಮಲ ಕರ್ಣಿಕಾಸ್ಥಲದಲ್ಲಿಹ ಹಕಾರವೆಂಬ ಬೀಜಾಕ್ಷರಮಧ್ಯದಲ್ಲಿ ಮೂರ್ತಿಧ್ಯಾನಂ ಮಾಡುವುದೆಂತೆನೆ : ಶುದ್ಧಪದ್ಮಾಸನನಾಗಿ ಚಂದ್ರಕಲಾಧರನಾದ ಪಂಚಮುಖ ತ್ರಿನೇತ್ರಂಗಳುಳ್ಳ ಶೂಲ ವಜ್ರ ಖಡ್ಗ ಪರಶು ಅಭಯಂಗಳಾಂತ ಪಂಚ ದಕ್ಷಿಣಹಸ್ತಂಗಳುಳ್ಳ ನಾಗ ಪಾಶ ಘಂಟೆ ಅನಲ ಅಂಕುಶಂಗಳಾಂತ ಪಂಚ ವಾಮಕರಂಗಳುಳ್ಳ ಕಿರೀಟಾದ್ಯಾಭರಣಂಗಳಿಂದಲಂಕೃತನಾದ ಸ್ಫಟಿಕದ ಕಾಂತಿಮಯನಾದ ಸದಾಶಿವಮೂರ್ತಿಯ ಧ್ಯಾನಿಸುತ್ತೆ
``ಓಂ ಅಸ್ಯ ಶ್ರೀಷಡಕ್ಷರಮಂತ್ರಸ್ಯ ವಾಮದೇವ ಋಷಿಃ ಪಂಕ್ತಿಃ ಛಂದಃ ಶ್ರೀಸದಾಶಿವೋ ದೇವತಾ ಓಂ ಬೀಜಂ ಉಮಾಶಕ್ತಿಃ ಉದಾತ್ತಸ್ವರಃ ಶ್ವೇತವರ್ಣಃ ಸದಾಶಿವಪ್ರೀತ್ಯರ್ಥೇ ಜಪೇ ವಿನಿಯೋಗಃ