ಯೋಗ ಶಿವಯೋಗವೆಂಬರು, ಯೋಗದ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಯೋಗ ಶಿವಯೋಗವೆಂಬರು
ಯೋಗದ ಹೊಲಬನಾರು ಬಲ್ಲರಯ್ಯಾ ? ಹೃದಯಕಮಲ ಮಧ್ಯದಲ್ಲಿ ಭ್ರಮಿಸುವನ ಕಳೆದಲ್ಲದೆ ಯೋಗವೆಂತಪ್ಪುದೊ ? ಐವತ್ತೆರಡಕ್ಷರದ ಲಿಪಿಯ ಓದಿ ನೋಡಿ ತಿಳಿದಲ್ಲದೆ ಯೋಗವೆಂತಪ್ಪುದೊ ? ಆರುನೆಲೆಯ ಮೇಲಿಪ್ಪ ಮಣಿಮಾಡದೊಳಗೆ ಇರಬಲ್ಲಡೆ ಅದು ಯೋಗ ! `ಸ್ಯೋಹಂ' ಎಂಬಲ್ಲಿ ಸುಳುಹಡಗಿ ಮನ ನಷ್ಟವಾಗಿರಬಲ್ಲ ಕಾರಣ
ಗುಹೇಶ್ವರಲಿಂಗದಲ್ಲಿ ನೀನು ಸ್ವತಂತ್ರಧೀರನೆಂಬುದು ಕಾಣಬಂದಿತ್ತು ನೋಡಾ ಸಿದ್ಧರಾಮಯ್ಯಾ.