ವಿಷಯಕ್ಕೆ ಹೋಗು

ರಂಗ ಬಾರೋ ರಂಗ ಬಾರೋ

ವಿಕಿಸೋರ್ಸ್ದಿಂದ

ರಂಗ ಬಾರೋ ರಂಗ ಬಾರೋ

[ಸಂಪಾದಿಸಿ]

ರಾಗ: ಮೋಹನ; ತಾಳ: ಅಟ್ಟ;

ರಂಗ ಬಾರೋ ರಂಗ ಬಾರೋ ರಂಗಯ್ಯ ಬಾರೋ
ಪೊನ್ನುಂಗುರ ನಿನಗೀವೆ ಪನ್ನಗಶಯನನೆ ಬಾರೋ ||೧||||ಪಲ್ಲವಿ||

ವೆಂಕಟರಮಣನೆ ಬಾರೋ ಪಂಕಜ ಚರಣವ ತೋರೋ
ಮುಕುಂದ ಮುಂದೆ ನಿಂದಾಡೋ ಕಿಂಕಿಣಿಕಿಣಿ ರವದಿಂದ ||೨||

ಕರ್ಣದೊಳಿಟ್ಟ ಮಾಗಾಯಿ ಹೊನ್ನ ಕದಪಿಲಿ ಧುಮುಕಾಡುತ್ತ
ಪನ್ನಗಶಯನನೆ ನಿನ್ನ ಚಿನ್ನದ ಸರ ಹೊಳೆವುತ್ತ ಬಾರೋ ||೩||

ಬಡನಡುವಿನ ಘಂಟೆ ಬಳುಕಿ ಢಣಢಣಿಸುತ್ತ
ಕಡಗ ಕಾಲಂದುಗೆ ಗೆಜ್ಜೆ ಅಡಿಗಡಿಗೆ ನುಡಿಸುತ್ತ ಬಾರೋ ||೪||

ಮುಂಗುರುಳಿನ ಸೊಬಗಿನಿಂದ ರಂಗ ನಿನ್ನ ಫಣೆಯೊಳಿಟ್ಟ
ರಂಗು ಮಾಣಿಕ್ಯದರಳೆಲೆ ತೂಗಿ ತೂಗಿ ಓಲಾಡುತ್ತ ಬಾರೋ || ೫ ||

ಕೊರಳಿಗಹಾಕಿದ ಹುಲಿಯುಗುರು ತೋರಮುತ್ತಿನ ಹಾರಂಗಳ್ಹೂಳೆಯುತ್ತ
ಪರಿಪರಿ ವಿಧಗಳಿಂದ ಪುರಂದರವಿಠಲ ಬಾರೋ || ೩ ||[]

ರಚನೆ: ಪುರಂದರದಾಸರು.

+೧. ಪುರಂದರದಾಸರ ಸಾಹಿತ್ಯ ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಪುರಂದರದಾಸರು

ಪರಿವಿಡಿ

[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ

[ಸಂಪಾದಿಸಿ]
  1. ದಾಸವಾಣಿ