ರುದ್ರನೆಂಬಾತನೊಬ್ಬ ಗಣೇಶ್ವರನು, ಭದ್ರನೆಂಬಾತನೊಬ್ಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ರುದ್ರನೆಂಬಾತನೊಬ್ಬ ಗಣೇಶ್ವರನು
ಭದ್ರನೆಂಬಾತನೊಬ್ಬ ಗಣೇಶ್ವರನು. ಶಂಕರನೆಂಬಾತನೊಬ್ಬ ಗಣೇಶ್ವರನು
ಶಶಿಧರನೆಂಬಾತನೊಬ್ಬ ಗಣೇಶ್ವರನು. ಪೃಥ್ವಿಯೆ ಪೀಠ ಆಕಾಶವೆ ಲಿಂಗ_ಅಂತಹ ಆತನೊಬ್ಬ ಗಣೇಶ್ವರನು. ಬಲ್ಲಾಳನ ವಧುವ ಬೇಡಿದಾತನೊಬ್ಬ ಗಣೇಶ್ವರನು. ಸಿರಿಯಾಳನ ಮಗನ ಭಿಕ್ಷವ ಬೇಡಿದಾತನೊಬ್ಬ ಗಣೇಶ್ವರನು. ಬ್ರಹ್ಮಕಪಾಲ ವಿಷ್ಣುಕಂಕಾಳವನಿಕ್ಕಿ ಆಡುವಲ್ಲಿ ನೀಲಕÀಂಠನೆಂಬಾತನೊಬ್ಬ ಗಣೇಶ್ವರನು._ ಇವರೆಲ್ಲರು ನಮ್ಮ ಗುಹೇಶ್ವರಲಿಂಗದೊಳಡಗಿಪ್ಪರು