ರುದ್ರಮುನಿಲಿಂಗವೆ ಸದ್ಭಕ್ತರನೆ ತೋರಿಸಯ್ಯಾ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ರುದ್ರಮುನಿಲಿಂಗವೆ ಸದ್ಭಕ್ತರನೆ ತೋರಿಸಯ್ಯಾ ಪ್ರಭುವೆ. ನಿಧಾನವನಗಿವೆನೆಂದು ಹೋದಡೆ
ವಿಘ್ನ ಬಪ್ಪುದು ಮಾಬುದೆ ಅಯ್ಯಾ ? ಸದಾಶಿವನ ಪೂಜಿಸಿಹೆನೆಂದು ಹೋದಡೆ ತರುಬಿ ಹಿಡಿವವಯ್ಯಾ ಸಕಲ ವಿಪತ್ತುಗಳು ಎಡೆಭಂಗವಿಲ್ಲದೆ ನಿಲಬಲ್ಲಡೆ ಸದಮಲಸುಖವನೀವ ನಮ್ಮ ಕೂಡಲಸಂಗಮದೇವರು