ಲಿಂಗಕ್ಕಲ್ಲದೆ ಮಾಡೆನೀ ಮನವನು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗಕ್ಕಲ್ಲದೆ ಮಾಡೆನೀ ಮನವನು
ಜಂಗಮಕ್ಕಲ್ಲದೆ ಮಾಡೆನೀ ಧನವನು
ಪ್ರಸಾದಕ್ಕಲ್ಲದೆ ಮಾಡೆನೀ ತನುವನು
ಲಿಂಗಜಂಗಮಪ್ರಸಾದಕ್ಕಲ್ಲದೆ ಬಾಯ್ದೆರೆಯೆನೆಂಬುದೆನ್ನ ಭಾಷೆ. ಅನರ್ಪಿತವಾದಡೆ ತಪ್ಪೆನ್ನದು
ಮೂಗ ಕೊಯಿ
ಕೂಡಲಸಂಗಮದೇವಾ.