ಲಿಂಗಗಂಭೀರದೊಳಗೆ ಜಗ ಹುಟ್ಟಿದಡೇನು,
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಲಿಂಗಗಂಭೀರದೊಳಗೆ ಜಗ ಹುಟ್ಟಿದಡೇನು
ಆ ಲಿಂಗದಿಂದ ಘನವೆ ಶಿವಲಿಂಗದೊಳಗೆ ಜಗ
ಜಗದೊಳಗೆ ಶಿವಲಿಂಗ
ಲೋಕಾದಿ ಲೋಕಂಗಳಿಗೆ ನೀನು ಭಕ್ತಿಯ ಕಂದೆರೆದು ತೋರಿದೆ
ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣಾ
ನಿನ್ನ ಶ್ರೀಪಾದಕ್ಕೆ ನಮೋ ನಮೋ ಎನುತ್ತಿರ್ದೆನು.