ಲಿಂಗಗಂಭೀರ ಗಮನಗೆಟ್ಟುದಲ್ಲಾ, ಜಂಗಮಗಂಭೀರ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗಗಂಭೀರ ಗಮನಗೆಟ್ಟುದಲ್ಲಾ
ಜಂಗಮಗಂಭೀರ ಸುಳುಹುಗೆಟ್ಟುದಲ್ಲಾ
ಪ್ರಸಾದಗಂಭೀರ ರೂಪುಗೆಟ್ಟುದಲ್ಲಾ
ಆಚಾರಗಂಭೀರ ಅವಯವಗೆಟ್ಟುದಲ್ಲಾ
ಜ್ಞಾನಗಂಭೀರ ನಡೆಗೆಟ್ಟುದಲ್ಲಾ
ಕೂಡಲಸಂಗಮದೇವರಲ್ಲಿ ಪ್ರಭುದೇವರು ನಿಜವನೈದಲು ಸಂಗನಬಸವಣ್ಣನ ಪ್ರಾಣ ಒಡನೆ ಬಳಿಸಂದಿತ್ತಲ್ಲಾ.