Library-logo-blue-outline.png
View-refresh.svg
Transclusion_Status_Detection_Tool

ಲಿಂಗಘ್ರಾಣದಲ್ಲಿ ಪ್ರಸಾದಿ. ಲಿಂಗಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಲಿಂಗಘ್ರಾಣದಲ್ಲಿ ಲಿಂಗಕ್ಕೆ ಲಿಂಗಗಂಧವನರ್ಪಿಸಿ
ಲಿಂಗಪ್ರಸಾದವ ಗ್ರಹಿಸುತಿರ್ಪನಯ್ಯಾ ನಿಮ್ಮ ಪ್ರಸಾದಿ. ಲಿಂಗಜಿಹ್ವೆಯಲ್ಲಿ ಲಿಂಗಕ್ಕೆ ಲಿಂಗರುಚಿಯನರ್ಪಿಸಿ ಲಿಂಗಪ್ರಸಾದವ ಗ್ರಹಿಸುತಿರ್ಪನಯ್ಯಾ ನಿಮ್ಮ ಪ್ರಸಾದಿ. ಲಿಂಗನೇತ್ರದಲ್ಲಿ ಲಿಂಗಕ್ಕೆ ಲಿಂಗರೂಪನರ್ಪಿಸಿ ಲಿಂಗಪ್ರಸಾದವ ಗ್ರಹಿಸುತಿರ್ಪನಯ್ಯಾ ನಿಮ್ಮ ಪ್ರಸಾದಿ. ಲಿಂಗತ್ವಕ್ಕಿನಲ್ಲಿ ಲಿಂಗಕ್ಕೆ ಲಿಂಗಸ್ಪರ್ಶವನರ್ಪಿಸಿ ಲಿಂಗಪ್ರಸಾದವ ಗ್ರಹಿಸುತಿರ್ಪನಯ್ಯಾ ನಿಮ್ಮ ಪ್ರಸಾದಿ. ಲಿಂಗಶ್ರೋತ್ರದಲ್ಲಿ ಲಿಂಗಕ್ಕೆ ಲಿಂಗಶಬ್ದವನರ್ಪಿಸಿ ಲಿಂಗಪ್ರಸಾದವ ಗ್ರಹಿಸುತಿರ್ಪನಯ್ಯಾ ನಿಮ್ಮ ಪ್ರಸಾದಿ. ಲಿಂಗಹೃದಯದಲ್ಲಿ ಲಿಂಗಕ್ಕೆ ಲಿಂಗತೃಪ್ತಿಯನರ್ಪಿಸಿ ಲಿಂಗಪ್ರಸಾದವ ಗ್ರಹಿಸುತಿರ್ಪನಯ್ಯಾ ನಿಮ್ಮ ಪ್ರಸಾದಿ. ಇಂತೀ ಒಳಹೊರಗೆ ತೆರಹಿಲ್ಲದೆ ಲಿಂಗಕ್ಕೆ ಲಿಂಗವನರ್ಪಿಸಿ
ಲಿಂಗಪ್ರಸಾದವ ಗ್ರಹಿಸಿ
ಘನಲಿಂಗವಾಗಿರ್ಪ ಮಹಾಪ್ರಸಾದಿಗಳ ಶ್ರೀಚರಣಕ್ಕೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.