ವಿಷಯಕ್ಕೆ ಹೋಗು

ಲಿಂಗದೊಡನೆ ಸಹಭೋಜನವ ಮಾಡುವ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಲಿಂಗದೊಡನೆ ಸಹಭೋಜನವ ಮಾಡುವ ಅದ್ವೈತಿಗಳ ಮಾತುಕೇಳಿ
ಸಂಸಾರದೊಳಗಿರ್ದ ಭಕ್ತನು
ಆ ಲಿಂಗದೊಡನೆ ಸಹಭೋಜನವ ಮಾಡಿದಡೆ ಅಘೋರನರಕ ತಪ್ಪದು. ಅದೆಂತೆಂದಡೆ: ``ರಾಗದ್ವೇಷಮದೋನ್ಮತ್ತಸ್ತತ್ತ್ವಜ್ಞಾನಪರಾಙ್ಮುಖಃ ಸಂಸಾರಸ್ಯ ಮಹಾಪಂಕೇ ಜೀರ್ಣಾಂಗೋ ಹಿ ನಿಮಜ್ಜತಿ ಇದನರಿದು ಲಿಂಗದೊಡನೆ ಸಹಭೋಜನವ ಮಾಡಲಾಗದು. ಮಾಡುವ ಅಜ್ಞಾನಿಗಳು ನೀವು ಕೇಳಿರೊ: ಗುರುಲಿಂಗಜಂಗಮತ್ರಿವಿಧವನು ಏಕಾರ್ಥವ ಮಾಡದನ್ನಕ್ಕರ ಸಹಭೋಜನವುಂಟೆ ಹೇಳಿರಣ್ಣಾ ! ಇಲ್ಲವಾಗಿ. ಅದೆಂತೆಂದಡೆ: ``ಗುರುರೇಕೋ ಲಿಂಗಮೇಕಂ ಏಕಾರ್ಥೋ ಜಂಗಮಸ್ತಥಾ ತ್ರಿವಿಧೇ ಭಿನ್ನಭಾವೇನ ಶ್ವಾನಯೋನಿಷು ಜಾಯತೇ _ ಇಂತೆಂಬ ಶಿವನವಾಕ್ಯವನರಿಯದೆ
ನೀವೇ ಲಿಂಗವೆಂಬಿರಿ ಲಿಂಗವೆ ನೀವೆಂಬಿರಿ ಜನನ_ಮರಣ
ತಾಗು_ನಿರೋಧ ಉಳ್ಳನ್ನಕ್ಕರ ನೀವೆಂತು ಲಿಂಗವಪ್ಪಿರಿ ಹೇಳಿರಣ್ಣಾ ? ಆ ಶಿವಜ್ಞಾನದ ಮಹಾವರ್ಮವನರಿಯದೆ ಲಿಂಗದೊಡನೆ ಸಹಭೋಜನವ ಮಾಡಿದೊಡೆ ಅಘೋರನರಕದಲ್ಲಿಕ್ಕದೆ ಬಿಡುವನೆ ನಮ್ಮ ಕೂಡಲಚೆನ್ನಸಂಗಮದೇವನು ?