ವಿಷಯಕ್ಕೆ ಹೋಗು

ಲಿಂಗದ ಕಲೆ ಅಂತರಂಗಕ್ಕೆ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಲಿಂಗದ ಕಲೆ ಅಂತರಂಗಕ್ಕೆ ವೇದಿಸುವ ಹಲವು ಸಾಧನಂಗಳಲ್ಲಿ ಒಂದು ಸಾಧನವನಿಲ್ಲಿ ಹೇಳಿಹೆನು ಕೇಳಿರಯ್ಯಾ. ಕರದಿಷ್ಟಲಿಂಗದಿ ತೆರೆದಿಟ್ಟ ದೃಷ್ಟಿ ಎವೆ ಹರಿಚದಂತಿರ್ದಡೆ ಆ ಲಿಂಗವು ಕಂಗಳಲ್ಲಿ ವ್ಯಾಪಿಸುತಿಪ್ಪುದು. ಆ ಮಂಗಲಮಯವಾದ ಕಂಗಳಲ್ಲಿ ಮನವಿರಿಸಿ
ಲಿಂಗನಿರೀಕ್ಷಣೆಯಿಂದ ನೆನೆಯಲು
ಆ ಲಿಂಗಮೂರ್ತಿ ಮನವನಿಂಬುಗೊಂಡು ಪ್ರಾಣಲಿಂಗವಾಗಿ ಪರಿಣಮಿಸುತಿಪ್ಪುದು. ಬಳಿಕ ಮನೋಮಯಲಿಂಗವನು ಭೇದವಿಲ್ಲದ ಸುವಿಚಾರದಿಂದ ಪರಿಭಾವಿಸಲು
ಆ ಲಿಂಗಮೂರ್ತಿ ಭಾವದಲ್ಲಿ ಸಮರಸಗೊಂಡು ಭಾವಲಿಂಗವಾಗಿ ಕಂಗೊಳಿಸುತಿಪ್ಪುದು. ಆ ಭಾವಲಿಂಗವನು ಎಡೆವಿಡದೆ ಭಾವಿಸುತ್ತ
ನೆನಹು ನಿರೀಕ್ಷಣೆಯಿಂದ ತಪ್ಪದಾಚರಿಸಲು
ಶರಣನು ನಿತ್ಯತೃಪ್ತನಾಗಿ ವಿರಾಜಿಸುತಿಪ್ಪನು. ಇದೇ ನಮ್ಮ ಕೂಡಲಚೆನ್ನಸಂಗಯ್ಯನೊಡನೆ ಕೂಡುವ ಪರಮೋಪಾಯವು.