ಲಿಂಗಪ್ರಸಾದವ ಜಂಗಮಕ್ಕೆ ಕೊಡುವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಲಿಂಗಪ್ರಸಾದವ ಜಂಗಮಕ್ಕೆ ಕೊಡುವ ಕರ್ಮಿ ನೀ ಕೇಳಾ ! ಜಂಗಮಪ್ರಸಾದವ ಲಿಂಗಕ್ಕೆ ಕೊಡುವ ಸುಧರ್ಮಿ ನೀ ಕೇಳಾ ! ಲಿಂಗಪ್ರಸಾದವ ಜಂಗಮಕ್ಕೆ ಕೊಡುವದು ಅನಾಚಾರ; ಜಂಗಮದ ಪ್ರಸಾದವ ಲಿಂಗಕ್ಕೆ ಕೊಡುವದು ಸದಾಚಾರ. ಅಅದೆಂತೆಂದಡೆ: ಲಿಂಗಾರ್ಪಿತಂ ಪ್ರಸಾದಂ ಚ ನ ದದ್ಯಾತ್ ಚರಮೂರ್ತಯೇ ಚರಾರ್ಪಿತಂ ಪ್ರಸಾದಂ ಚ ತದ್ದದ್ಯಾತ್ ಲಿಂಗಮೂರ್ತಯೇ ಎಂದುದಾಗಿ
ಇದು ಕಾರಣ
ಕೂಡಲಚೆನ್ನಸಂಗಯ್ಯಾ
ಜಂಗಮ ಮುಖದಲ್ಲಿ ಲಿಂಗ ನಿರಂತರ ಸುಖಿ