Library-logo-blue-outline.png
View-refresh.svg
Transclusion_Status_Detection_Tool

ಲಿಂಗವಿಲ್ಲದೆ ನಡೆವವರ, ಲಿಂಗವಿಲ್ಲದೆ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಲಿಂಗವಿಲ್ಲದೆ ನಡೆವವರ
ಲಿಂಗವಿಲ್ಲದೆ ನುಡಿವವರ -ಲಿಂಗವಿಲ್ಲದೆ ಉಗುಳ ನುಂಗಿದಡೆ ಅಂದಂದಿಗೆ ಕಿಲ್ಬಿಷವಯ್ಯಾ_ ಏನೆಂಬೆನೇನೆಂಬೆನಯ್ಯಾ ಲಿಂಗವಿಲ್ಲದೆ ನಡೆವವರ ಅಂಗ ಲೌಕಿಕ ಮುಟ್ಟಲಾಗದು. ಲಿಂಗವಿಲ್ಲದೆ ನುಡಿವವರ ಶಬ್ದ ಸೂತಕ ಕೇಳಲಾಗದು. ಲಿಂಗವಿಲ್ಲದೆ ಗಮನಿಸಿದಡೆ ಆ ನಡೆನುಡಿಗೊಮ್ಮೆ ವ್ರತಗೇಡಿ ಕೂಡಲಸಂಗಮದೇವಾ.