ಲಿಂಗವೆಂತಿಪ್ಪುದೆಂದರಿಯೆನು, ಲಿಂಗದ ನಿಲವೆಂತುಟೆಂಬುದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗವೆಂತಿಪ್ಪುದೆಂದರಿಯೆನು
ಲಿಂಗದ ನಿಲವೆಂತುಟೆಂಬುದ ಹೋದ ಹೊಲಬನರಿಯೆನು
ಲಿಂಗಾರ್ಚನೆಯ ಮಾತು ಎನಗೇಕಯ್ಯಾ ಜಂಗಮಲಿಂಗವಾಗಿ ಬಂದು ನೀವಿರುತ್ತಿರಲು
ಸ್ಥಾವರಕ್ಕೆ ಮಚ್ಚಿ ಮರುಳಾದೆನು ಕೂಡಲಸಂಗಮದೇವಾ
ಎನ್ನ ತಪ್ಪನೆ ಎಣಿಸಿಹೆನೆಂದಡೆ ಕಡೆಯಿಲ್ಲ.