ವಿಷಯಕ್ಕೆ ಹೋಗು

ಲಿಂಗವೇ ಪತಿಯಾಗಿ ತಾನೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಲಿಂಗವೇ ಪತಿಯಾಗಿ ತಾನೆ ಸತಿಯಾಗಿ ಅನ್ಯವನರಿಯದೆ ಪಂಚೇಂದ್ರಿಯರಹಿತನಾಗಿ ತೆರಹಿಲ್ಲದರುಹು ತಾನಾಗಿ ನೆರೆ ಅರುಹಿನೊಳು ನಿಬ್ಬೆರಗಾಗಿ ಹೃದಯ ಕಮಲ ಮಧ್ಯದಲ್ಲಿ ಪರಮೇಶ್ವರನೊಳಗಣ ಸಮರಸ ಸ್ನೇಹವೆರಸಿ ಅಗಲದಿಪ್ಪುದೀಗ ಶರಣಸ್ಥಲವಿದೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.