ವಿಷಯಕ್ಕೆ ಹೋಗು

ಲಿಂಗಾಂಗಸಾಮರಸ್ಯವನರಿಯದೆ ಅರ್ಪಿಸಿದೆವೆಂಬ ಖಂಡಿತ

ವಿಕಿಸೋರ್ಸ್ದಿಂದ


Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಲಿಂಗಾಂಗಸಾಮರಸ್ಯವನರಿಯದೆ ಖಂಡಿತ ಬುದ್ಧಿಯಿಂದೆ ಲಿಂಗವ ಬೇರಿಟ್ಟುಕೊಂಡು ಸಕಲಭೋಗೋಪಭೋಗವನು ಅರ್ಪಿಸಿದೆವೆಂಬ ಭಂಗಗೇಡಿಗಳ ಮಾತ ಕೇಳಲಾಗದು. ಅದೆಂತೆಂದೊಡೆ : ಆ ಲಿಂಗಕ್ಕೆ ಶರಣನಂಗದ ಮಜ್ಜನಸುಖವಲ್ಲದೆ ಬೇರೆ ಮಜ್ಜನಸುಖವುಂಟೆ ? ಆ ಲಿಂಗಕ್ಕೆ ಶರಣನ ಲಲಾಟದ ಶ್ರೀವಿಭೂತಿ ಗಂಧಾಕ್ಷತೆಯ ಶೃಂಗಾರವಲ್ಲದೆ ಬೇರೆ ಶೃಂಗಾರವುಂಟೆ ? ಆ ಲಿಂಗಕ್ಕೆ ಶರಣನ ಕರ್ಣದಲ್ಲಿಯ ಪಂಚಮಹಾವಾದ್ಯದ ಕೇಳಿಕೆಯಲ್ಲದೆ ಬೇರೆ ಕೇಳಿಕೆಯುಂಟೆ ? ಆ ಲಿಂಗಕ್ಕೆ ಶರಣನ ಜಿಹ್ವೆಯಲ್ಲಿಯ ಷಡುರಸಾನ್ನದ ನೈವೇದ್ಯವಲ್ಲದೆ ಬೇರೆ ನೈವೇದ್ಯವುಂಟೆ ? ಆ ಲಿಂಗಕ್ಕೆ ಶರಣನ ಕಂಗಳಲ್ಲಿಯ ನಾನಾ ವಿಚಿತ್ರರೂಪಿನ ವಿನೋದವಲ್ಲದೆ ಬೇರೆ ವಿನೋದವುಂಟೆ ? ಆ ಲಿಂಗಕ್ಕೆ ಶರಣನ ತ್ವಕ್ಕಿನಲ್ಲಿಯ ವಸ್ತ್ರಾಭರಣದ ಅಲಂಕಾರವಲ್ಲದೆ ಬೇರೆ ಅಲಂಕಾರವುಂಟೆ ? ಆ ಲಿಂಗಕ್ಕೆ ಶರಣನ ಘ್ರಾಣದಲ್ಲಿಯ ಸುಗಂಧ ಪರಿಮಳವರ್ಪಿತವಲ್ಲದೆ ಬೇರೆ ಅರ್ಪಿತವುಂಟೆ ? ಆ ಲಿಂಗಕ್ಕೆ ಶರಣನ ಪರಮ ಹೃದಯಕಮಲವೆ ನಿಜವಾಸವಲ್ಲದೆ ಬೇರೆ ನಿಜವಾಸವುಂಟೆ ? ಇಂತೀ ಶರಣಸನ್ನಿಹಿತಲಿಂಗ
ಲಿಂಗಸನ್ನಿಹಿತ ಶರಣನೆಂಬುದನರಿಯದೆ ಅನಂತಕಾಲ ಲಿಂಗವ ಧರಿಸಿಕೊಂಡು ಲಿಂಗಾಂಗಿಯೆನಿಸಿಕೊಂಡಡೇನು ? ಅದು ಪಶುವಿನ ತೊಡೆಯಲ್ಲಿ ಬರೆದ ಮುದ್ರೆಯಂತೆ ಕಂಡೆಯಾ ಅಖಂಡೇಶ್ವರಾ.