ಲಿಂಗಾರ್ಚನೆಯಿಂದ ಲಿಂಗಾರ್ಚನೆಯಮಾಡಿದ ಜಂಗಮಾರ್ಚನೆಯದ್ಥಿಕ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಲಿಂಗಾರ್ಚನೆಯಿಂದ ಜಂಗಮಾರ್ಚನೆಯದ್ಥಿಕ ನೋಡಾ. ಅದೆಂತೆಂದೊಡೆ : ಆದಿಯಲ್ಲಿ ಲಿಂಗಾರ್ಚನೆಯಮಾಡಿದ ತಾರಜ ತಂಡಜ ರೋಮಜರಿಗೆ ಪ್ರಳಯವಾಯಿತ್ತು. ಆದಿಯಲ್ಲಿ ಲಿಂಗಾರ್ಚನೆಯಮಾಡಿದ ನವಕೋಟಿಬ್ರಹ್ಮರಿಗೆ ಪ್ರಳಯವಾಯಿತ್ತು. ಆದಿಯಲ್ಲಿ ಲಿಂಗಾರ್ಚನೆಯಮಾಡಿದ ಶತಕೋಟಿ ನಾರಾಯಣರಿಗೆ ಪ್ರಳಯವಾಯಿತ್ತು. ಆದಿಯಲ್ಲಿ ಲಿಂಗಾರ್ಚನೆಯಮಾಡಿದ ಅನಂತಕೋಟಿ ರುದ್ರರಿಗೆ ಪ್ರಳಯವಾಯಿತ್ತು. ಇದು ಕಾರಣ ಲಿಂಗಾರ್ಚನೆ ಪ್ರಳಯಕ್ಕೊಳಗು
ಜಂಗಮಾರ್ಚನೆ ಪ್ರಳಯಾತೀತವೆಂದರಿದು ಜಂಗಮವೇ ಪ್ರಾಣವೆಂದು ನಂಬಿ
ಅನಂತಕೋಟಿ ಪ್ರಳಯಂಗಳ ಮೀರಿ
ಪರಬ್ರಹ್ಮವನೊಡಗೂಡಿದ ಸಂಗನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯ ಅಖಂಡೇಶ್ವರಾ.