ಲಿಂಗಾರ್ಪಿತವಿಲ್ಲದೆ ಬೋನ ಪದಾರ್ಥವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗಾರ್ಪಿತವಿಲ್ಲದೆ ಬೋನ ಪದಾರ್ಥವ ಕೊಂಡಡೆ
ಮಕ್ಕಳಡಗು ನರಮಾಂಸವಯ್ಯಾ. ಲಿಂಗಾರ್ಪಿತವಿಲ್ಲದೆ ಉದಕವ ಮುಕ್ಕುಳಿಸಿದಡೆ ನಾಯ ಮೂತ್ರವ ಮುಕ್ಕಳಿಸಿದುದಯ್ಯಾ. ಲಿಂಗಾರ್ಪಿತವಿಲ್ಲದೆ ಹಲುಕಡ್ಡಿಯನಿರಿದಡೆ ನಾಯ ಎಲುಬಿದ್ದ ಮಲಕ್ಕೆ ಬಾಯಿದೆರೆದು. ನಿಮಗೆತ್ತಿದ ಕರವ ಅನ್ಯರಿಗೆ ಮುಗಿದಡೆ ಅಘೋರ ನರಕವಯ್ಯಾ. ಈ ಭಾಷೆಗೆ ತಪ್ಪಿದಡೆ ತಲೆದಂಡ ತಲೆದಂಡ
ಅಳವರಿಯದೆ ನುಡಿದೆನು
ಕಡೆಮುಟ್ಟಿ ನಡಸಯ್ಯಾ. ಪ್ರಭುವೆ ಕೂಡಲಸಂಗಮದೇವಾ.