ಲಿಂಗ ಒಳಗೊ ಹೊರಗೊ?

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಲಿಂಗ ಒಳಗೊ ಹೊರಗೊ? ಬಲ್ಲಡೆ ನೀವು ಹೇಳಿರೆ ? ಲಿಂಗ ಎಡನೊ ಬಲನೊ ? ಬಲ್ಲಡೆ ನೀವು ಹೇಳಿರೆ ? ಲಿಂಗ ಮುಂದೊ ಹಿಂದೊ ? ಬಲ್ಲಡೆ ನೀವು ಹೇಳಿರೆ ? ಲಿಂಗ ಸ್ಥೂಲವೊ ಸೂಕ್ಷ್ಮವೊ ? ಬಲ್ಲಡೆ ನೀವು ಹೇಳಿರೆ ? ಲಿಂಗ ಪ್ರಾಣವೊ
ಪ್ರಾಣ ಲಿಂಗವೊ ? ಬಲ್ಲಡೆ ನೀವು ಹೇಳಿರೆ ಗುಹೇಶ್ವರಲಿಂಗವನು ?