ವಿಷಯಕ್ಕೆ ಹೋಗು

ಲಿಖಿತಕ್ಕೆ ಲಿಖಿತ ಮಹಾಲಿಖಿತವುಂಟೆಂಬೆನೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಲಿಖಿತಕ್ಕೆ ಲಿಖಿತ ಮಹಾಲಿಖಿತವುಂಟೆಂಬೆನೆ ? ಲಿಂಗ ಸಂಸಾರಿ
ಲಿಂಗವಿಲ್ಲೆಂಬೆನೆ ? ಅಂಗ ಸಂಸಾರಿ
ಇಲ್ಲಿನ್ನಾವುದ ಘನವೆಂಬೆ
ಆವುದ ಕಿರಿದೆಂಬೆ
ತಾಳಸಂಪುಟಕ್ಕೆ ಬಾರದ ಘನವ ? ಸುಖಕ್ಕೆ ಸುಖ ತಾರುಗಂಡು
ಸಮಸುಖವಾಗಿ
ಉಪಮಾತೀತ ತ್ರಿವಿಧ ಸಂಪತ್ತುಗಳೆಂಬ ವಾಯುವಾಕುದಲ್ಲಿ
ಆದಿ ಮಧ್ಯ ಅವಸಾನರಹಿತ ಅನಂತ ಶರಣ ಅಜಾತ ಕೂಡಲಚೆನ್ನಸಂಗಾ ನಿರ್ನಾಮ ಲಿಂಗೈಕ್ಯ.