ವಿಷಯಕ್ಕೆ ಹೋಗು

ಲೋಕದ ಚೇಷ್ಟೆಗೆ ರವಿ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಲೋಕದ ಚೇಷ್ಟೆಗೆ ರವಿ ಬೀಜವಾದಂತೆ
ಕರಣಂಗಳ ಚೇಷ್ಟೆಗೆ ಮನವೇ ಬೀಜ. ಎನಗುಳ್ಳುದೊಂದು ಮನ. ಆ ಮನ ನಿಮ್ಮಲ್ಲಿ ಸಿಲುಕಿದ ಬಳಿಕ ಎನಗೆ ಭವವುಂಟೆ ಚೆನ್ನಮಲ್ಲಿಕಾರ್ಜುನಾ ?