ಲೋಕದ ಡೊಂಕ ನೀವು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಲೋಕದ ಡೊಂಕ ನೀವು ತಿದ್ದುವಿರಯ್ಯ ನಿಮ್ಮ (ತನುಮನದ) ಡೊಂಕ ತಿದ್ದಿ ತೀಡಿಕೊಳಲರಿಯದೆ. ಪುರಾತನರು
ನುಡಿದಂತೆ ನಡೆಯದವರೆಲ್ಲ
ಕಡು ಓದಿದ ಗಿಳಿ ತನ್ನ ಮಲವ ತಾ ತಿಂದಂತೆ. ನೆರೆಮನೆಯವರ ದುಃಖವ ಕೇಳಿ
ಗಡ್ಡ ಮೀಸೆ ಮುಂಡೆಯ ಬೋಳಿಸಿಕೊಂಡು (ಕಡೆಯಲ್ಲಿ) ಹೋಗಿ ಅಳುತಿಪ್ಪವರ ಕಂಡರೆ ಕೂಡಲಚೆನ್ನಸಂಗನ ಶರಣರು ನಗುತಿಪ್ಪರಯ್ಯಾ.