ಲೋಕಮೆಚ್ಚೆ ನಡೆವರಯ್ಯ, ಲೋಕಮೆಚ್ಚೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಲೋಕಮೆಚ್ಚೆ ನಡೆವರಯ್ಯ
ಲೋಕಮೆಚ್ಚೆ ನುಡಿವರಯ್ಯ. ಲೋಕಮೆಚ್ಚೆ ನಡೆಯೆ ಹೋಯಿತ್ತೆನ್ನ ಶಿವಾಚಾರ. ಲೋಕಮೆಚ್ಚೆ ನುಡಿಯೆ ಹೋಯಿತ್ತೆನ್ನ ಶಿವಜ್ಞಾನ. ಲೌಕಿಕವರ್ತನ ನಾಯಕನರಕವೆಂದಿತ್ತು ಗುರುವಚನ. ಇದು ಕಾರಣ ಲಿಂಗ ಮೆಚ್ಚೆ ನಡವೆ; ಲಿಂಗ ಮೆಚ್ಚೆ ನುಡಿವೆ ಲಿಂಗ ಲಿಂಗವೆಂಬ ಲಿಂಗಭ್ರಾಂತನಾಗಿ ವರ್ತಿಸುವೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.