ಲೋಕವ ಹಿಡಿದು ಲೋಕದ ಸಂಗದಂತಿಪ್ಪೆ. ಆಕಾರವಿಡಿದು ಸಾಕಾರಸಹಿತ ನಡೆವೆ. ಹೊರಗೆ ಬಳಸಿ ಒಳಗೆ ಮರೆದಿಪ್ಪೆ. ಬೆಂದನುಲಿಯಂತೆ ಹುರಿಗುಂದದಿಪ್ಪೆ. ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಾ ಹತ್ತರೊಳಗೆ ಹನ್ನೊಂದಾಗಿ ನೀರತಾವರೆಯಂತಿಪ್ಪೆ.