ವಿಷಯಕ್ಕೆ ಹೋಗು

ವಂದಿಸಿ ನಿಂದಿಸುವ ಸಂದೇಹಿಯ

ವಿಕಿಸೋರ್ಸ್ದಿಂದ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ವಂದಿಸಿ ನಿಂದಿಸುವ ಸಂದೇಹಿಯ ಮನೆಯ ಕೂಳು ಹಂದಿಯ ಬಾಯ ತುತ್ತ ನಾಯಿ ಕಿತ್ತುಕೊಂಡು ತಿಂದಂತಾಯಿತ್ತು ಕಾಣ. ಅದೇನು ಒಡಲ ಉಪಾಧಿಗೆ ತನ್ನ ನಿಂದಿಸಿದುದನರಿಯದೆ ಭಕ್ತನೆಂದು ಒಳಗಿಟ್ಟುಕೊಂಡು ನಡೆವವರನೊಲ್ಲೆ ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.