ವಚನದಲ್ಲಿ ನಾಮಾಮೃತ ತುಂಬಿ ನಯನದಲ್ಲಿ ಮೂರುತಿ ತುಂಬಿ ಮನದಲ್ಲಿ ನಿಮ್ಮ ನೆನಹು ತುಂಬಿ ಕಿವಿಯಲ್ಲಿ ಕೀರುತಿ ತುಂಬಿ. ಕೂಡಲಸಂಗಮದೇವಾ ನಿಮ್ಮ ಚರಣಕಮಲದೊಳಗಾನು ತುಂಬಿ. 492