ವಚನನಾನುಭವವ ಮಾಡುವಯ್ಯಗಳಿರಾ, ನಿಮಗೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ವಚನನಾನುಭವವ ಮಾಡುವಯ್ಯಗಳಿರಾ
ನಿಮಗೆ ವಚನ ಪ್ರಾಣಲಿಂಗವೊ ಅಲ್ಲ
ದಾಸೋಹ ಪ್ರಾಣಲಿಂಗವೊ ! ಆರೂಢವನೆ ಕಲಿತು ಅಂಗಸಂಗದಲಿಪ್ಪ ಆರೂಢ ಪ್ರಾಣಲಿಂಗವೊ ಅಲ್ಲ
ದಾಸೋಹ ಪ್ರಾಣಲಿಂಗವೊ ! ಬ್ರಹ್ಮವಿದ್ಯೆಯನೆ ಕಲಿತು ಭ್ರಮೆಯೆಂಬ ಶೂಲದ ಮೇಲೆ ಕುಳ್ಳಿರ್ದು
ಆ ಬ್ರಹ್ಮವಿದ್ಯೆಯೆ ಪ್ರಾಣಲಿಂಗವೊ ಅಲ್ಲ
ದಾಸೋಹವೆ ಪ್ರಾಣಲಿಂಗವೊ ! ಎಲ್ಲ ಮಾತುಗಳ ಹಲ್ಲಣಿಸಿಕೊಂಡು
ಬಲು ಹುಲಿಯ ಬೆನ್ನಲಿ ಬಪ್ಪತೆರನಂತೆ. ಬಲ್ಲವರಿಗೆ ಬಲ್ಲವರು ನಮ್ಮ ಜಂಗಮದಾಸೋಹಿಗಳು. ಕೂಡಲಸಂಗಮದೇವರರಿತಡೆ ನಿಮ್ಮ ಹಲ್ಲ ಕಳೆವ ಕಾಣೆ !