ವಿಷಯಕ್ಕೆ ಹೋಗು

ವನಸುಮ

ವಿಕಿಸೋರ್ಸ್ದಿಂದ

ವನಸುಮ

[ಸಂಪಾದಿಸಿ]

ವನಸುಮದೊಲೆನ್ನ ಜೀ-
ವನವು ವಿಕಸಿಸುವಂತೆ
ಮನವನನುಗೊಳಿಸು ಗುರುವೇ ಹೇ ದೇವ ||
ಜನಕೆ ಸಂತಸವೀವ
ಘನನು ನಾನೆಂದೆಂಬ
ಎಣಿಕೆ ತೋರದೆ ಜಗದ ಪೊಗಳಿಕೆಗೆ ಬಾಯ್ ಬಿಡದೆ ||

ಕಾನನದಿ ಮಲ್ಲಿಗೆಯು
ಮೌನದಿಂ ಬಿರಿದು ನಿಜ
ಸೌರಭವ ಸೂಸಿ ನಲವಿಂ
ತಾನೆಲೆಯ ಪಿಂತಿರ್ದು
ದೀನತೆಯ ತೋರಿ ಅಭಿ-
ಮಾನವನು ತೊರೆದು ಕೃತಕೃತ್ಯತೆಯ ಪಡೆವಂತೆ ||

ಉಪಕಾರಿ ನಾನು ಎನ್-
ಉಪಕೃತಿಯು ಜಗಕೆಂಬ
ವಿಪರೀತ ಮತಿಯನುಳಿದು
ವಿಪುಲಾಶ್ರಯವನೀವ
ಸುಫಲ ಸುಮಭರಿತ ಪಾ-
ದಪದಂತೆ ನೈಜಮಾದೊಳ್ಪಿನಿಂ ಬಾಳ್ವವೊಲು ||[]

  • ಕವಿ:ಡಿ. ವಿ. ಗುಂಡಪ್ಪ

ಪರಿವಿಡಿ

[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ

[ಸಂಪಾದಿಸಿ]
  1. https://kn.wikisource.org/s/1h2s ಪುಟ:ಕನ್ನಡದ ಬಾವುಟ.djvu/೧೭೧
"https://kn.wikisource.org/w/index.php?title=ವನಸುಮ&oldid=253422" ಇಂದ ಪಡೆಯಲ್ಪಟ್ಟಿದೆ