ವಸ್ತುವಿನ ಸ್ವರೂಪ ಹೇಳಿಹೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ವಸ್ತುವಿನ ಸ್ವರೂಪ ಹೇಳಿಹೆ ಕೇಳು
ಹೊಳೆವುತ್ತಿದ್ದ ಕಾಲಾಗ್ನಿಯೋಪಾದಿಯ ಕಾಂತಿಯನುಳ್ಳುದು; ಅನಂತಕೋಟಿ ಮಿಂಚುಗಳ ಪ್ರಭೆಯ ಪ್ರಕಾಶವನುಳ್ಳುದು; ಅನಂತಕೋಟಿ ಸೋಮ ಸೂರ್ಯರ ಪ್ರಭೆಯ ಪ್ರಕಾಶವನುವುಳ್ಳದು; ಮುತ್ತು ಮಾಣಿಕ್ಯ ನವರತ್ನದ ಕಿರಣಂಗಳ ಪ್ರಭೆಯ ಪ್ರಕಾಶವನುಳ್ಳುದು; ನಿನ್ನ ಪಿಂಡದ ಮಧ್ಯದಲ್ಲಿ ಉದಯವಾಗಿ ತೋರುವ ಪಿಂಡಜ್ಞಾನದ ಮಹದರುಹೆ ಪರಬ್ರಹ್ಮವೆಂದು ಅರಿಯಲು ಯೋಗ್ಯವೆಂದೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.