Library-logo-blue-outline.png
View-refresh.svg
Transclusion_Status_Detection_Tool

ವಸ್ತುವೆಂದಡೆ:ಹೇಂಗಾಯಿತ್ತಯ್ಯಾಯೆಂದಡೆ, ಹೇಳಿಹೆ ಕೇಳಯ್ಯಾ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ವಸ್ತುವೆಂದಡೆ:ಹೇಂಗಾಯಿತ್ತಯ್ಯಾಯೆಂದಡೆ
ಹೇಳಿಹೆ ಕೇಳಯ್ಯಾ ಮಗನೆ. ಕಾಷ್ಟದಲ್ಲಿ ಅಗ್ನಿ ಹೇಂಗೆ ಹಾಂಗಿಪ್ಪುದು; ಕ್ಷೀರದೊಳಗೆ ಘೃತ ಹೇಂಗೆ ಹಾಂಗಿಪ್ಪುದು; ತಿಲದಲ್ಲಿ ತೈಲ ಹೇಂಗೆ ಹಾಂಗಿಪ್ಪುದು; ಜಲದೊಳಗೆ ಸೂರ್ಯ ಹೇಂಗೆ ಹಾಂಗಿಪ್ಪುದು; ಕನ್ನಡಿಯೊಳಗೆ ಪ್ರತಿಬಿಂಬ ಹೇಂಗೆ ಹಾಂಗಿಪ್ಪುದು; ಸರ್ವತ್ರ ಎಲ್ಲಾ ಠಾವಿನಲ್ಲಿಯೂ ವಸ್ತುವಿನ ಕಳೆ ಪರಿಪೂರ್ಣವಾಗಿಪ್ಪುದೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.